Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳ

ಬಂಟ್ವಾಳ: ಎರಡು ಬೈಕ್ ಹಾಗೂ ಪಿಕಪ್ ವಾಹನಗಳ ನಡುವೆ ಸರಣಿ ಅಪಘಾತ; ಬೈಕ್ ಸವಾರರಿಗೆ ಗಾಯ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿ ಬಿಸಿರೋಡು – ಕಡೂರು ರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್ ಹಾಗೂ ಪಿಕಪ್ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಬೈಕ್ ಸವಾರರಾದ ಗುಣವಂತ ಮತ್ತು ಶಮೀರ್ ಎಂಬವರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಗುಣವಂತ ಎಂಬವರು ಬಿಸಿರೋಡು ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಎದುರಿನಿಂದ ಡಿಕ್ಕಿ ಹೊಡೆದಿದ್ದಾನೆ. ಇದೇ ವೇಳೆ ಪಿಕಪ್ ವಾಹನದ ಹಿಂಬದಿಯಿAದ ಬರುತ್ತಿದ್ದ ಬೈಕ್ ಸವಾರ ಹಿಂಬದಿಯಿAದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಗಾಯಗೊಂಡಿದ್ದು,ಬAಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು