Friday, September 20, 2024
ಸುದ್ದಿ

ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದ ಅಮಿತ್ ಶಾ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಕೇರಳದ ಕಣ್ಮೂರು ಜಿಲ್ಲೆಯ ತಾಳಿಕ್ಕಾವು’ನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿದ ಬಳಿಕ ಮಾತನಾಡಿರುವ ಅವರು, ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್’ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.

ಕೇರಳ ರಾಜ್ಯದಲ್ಲಿಂದು ಧಾರ್ಮಿಕ ನಂಬಿಕೆಗಳು ಹಾಗೂ ರಾಜ್ಯ ಸರ್ಕಾರದ ಕ್ರೌರ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಬಿಜೆಪಿ, ಆರ್’ಎಸ್ಎಸ್ ಹಾಗೂ ಇತರೆ ಸಂಘಟನೆಗಳ 2000ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಲಾಗಿದೆ. ಬಿಜೆಪಿ ಅಯ್ಯಪ್ಪ ಭಕ್ತರ ಜೊತೆಗೆ ಬಂಡೆಯಂತೆ ನಿಂತಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಇದೇ ವೇಳೆ ಕೇರಳದ ಆಡಳಿತಾರೂಢ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಅವರು, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಹಿಂಸಾಚಾರ ಸೃಷ್ಟಿಸುತ್ತಿರುವವರಿಗೆ ಒಂದು ಮಾತನ್ನು ಹೇಳುತ್ತೇನೆ. ವಿವಿಧ ನಿಯಮ ಹಾಗೂ ಪದ್ಧತಿಗಳೊಂದಿಗೆ ಸಾಕಷ್ಟು ದೇವಾಲಯಗಳು ನಡೆಯುತ್ತಿವೆ.

ಸರ್ಕಾರದ ವರ್ತನೆ ಹೀಗೆಯೇ ಮುಂದುವರೆದರೆ, ಎಲ್’ಡಿಎಸ್ ಸರ್ಕಾರವನ್ನು ಕೆಳಗಿಳಿಸಲು ಬಿಜೆಪಿ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.
ದೇವಾಲಯದ ಪ್ರವೇಶದ ಮೂಲಕ ಲಿಂಗ ಸಮಾನತೆಯನ್ನು ಸಾಧಿಸಲು ಸಾಧ್ಯವಿಲ್ಲ. ಕೇರಳ ರಾಜ್ಯದಲ್ಲಿಂದು ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ. ಅಯ್ಯಪ್ಪ ಭಕ್ತರನ್ನು ಭೇದಿಸುವುದು ಬೆಂಕಿಯೊಂದಿಗೆ ಆಟವಾಡಿದಂತೆ ಎಂದು ಎಚ್ಚರಿಸಿದ್ದಾರೆ.