Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶೌರ್ಯ ವಿಪತ್ತು ತಂಡದಿಂದ ಗೋಳ್ತಮಜಲು ಶಾಲೆ ಅಪಾಯಕಾರಿ ಕೊಠಡಿ ತೆರವು – ಕಹಳೆ ನ್ಯೂಸ್

ಗೋಳ್ತಮಜಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಅಪಾಯಕಾರಿಯಾದ ಎರಡು ಕೊಠಡಿಗಳು ಶಾಲಾರಂಭ ಸಮಯ ಮಕ್ಕಳಿಗೆ ತೊಂದರೆಯಾಗಬಹುದು ಎಂಬ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ.

ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಮಾಧ್ಯಮಗಳು ವರದಿ ಬಿತ್ತರಿಸಿ ಎಚ್ಚರಿಸಿದ ಬಳಿಕ ಇಲಾಖೆ ಎಚ್ಚೆತ್ತುಕೊಂಡು ಕಟ್ಟಡವನ್ನು ತೆರವುಗೊಳಿಸುವ ಸಾಹಸದ ಕೆಲಸಕ್ಕೆ ಕೈ ಹಾಕಿದ್ದು, ಈ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಹಾಗೂ ಎಸ್.ಡಿ.ಎಂ.ಸಿ.ತಲೆಗೆ ಹಾಕಲಾಗಿತ್ತು. ಇದೀಗ ಶಾಲಾ ಮುಖ್ಯ ಶಿಕ್ಷಕಿ ಹಾಗೂ ಎಸ್.ಡಿ.ಎಂ.ಸಿ.ಯವರ ಮನವಿ ಮೇರೆಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದವರು ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು ತೆರವು ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಾಲೂಕು ಯೋಜನೆ ಅಧಿಕಾರಿ ರಮೇಶ್, ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ತಂಡದ ಸಂಯೋಜಕ ವಿದ್ಯಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಮಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವೆಂಕಪ್ಪ, ಓಂ ಶ್ರೀ ಸಾಯಿ ಗಣೇಶ್ ಸೇವಾ ಟ್ರಸ್ಟ್ ನ ರಾಮಚಂದ್ರ, ಚಿದಾನಂದ ಚೇತನ್, ಮೊದಲಾದವರ ಉಪಸ್ಥಿತರಿದ್ದರು. ಕಾರ್ಯಕ್ರಮದ ಜೊತೆಗೆ ಕೈಜೋಡಿಸಿದ ಓಂ ಶ್ರೀ ಸಾಯಿ ಗಣೇಶ್ ಸೇವಾ ಟ್ರಸ್ಟ್ ಗೊಳ್ತಮಜಲು ಸಹಕರಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು