ಪಡುಮಾರ್ನಾಡಿನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ, ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು- ಕಹಳೆ ನ್ಯೂಸ್
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್, ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಇವುಗಳ ವತಿಯಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನಾಲ್ಕು ದಿನಗಳ ಕಾಲ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು.
ಪಂಚಾಯತ್ ವತಿಯಿಂದ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಂಡಿದ್ದು ಮುಂದುವರೆದ ಭಾಗವಾಗಿ ಈ ಶಿಬಿರವನ್ನು ಆಯೋಜಿಸಲಾಗಿದ್ದು ಗ್ರಂಥಾಲಯ ಮೇಲ್ವೀಚಾರಕಿ ವನಿತಾ ಅವರು ಮಕ್ಕಳಿಗೆ ಪೇಪರ್ ಬಳಸಿ ಹೂಗಳನ್ನು ರಚಿಸುವುದು, ಪೇಪರ್ ಲೋಟಗಳನ್ನು ಬಳಸಿ ಆಟದ ವಸ್ತುಗಳ ರಚನೆ, ಡ್ರಾಯಿಂಗ್, ಪ್ರಬಂಧ ರಚನೆ ಹಾಗೂ ನೃತ್ಯ ಮುಂತಾದುವುಗಳ ಬಗ್ಗೆ ತರಬೇತಿಯನ್ನು ನೀಡಿದರು.
ಉದ್ಘಾಟನೆ : ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ವೆಂಕಟಾಚಲಪತಿ ರಾಜು ಅವರು ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ವನಿತಾ ಈ ಸಂದರ್ಭದಲ್ಲಿದ್ದರು.
ಪಂಚಾಯತ್ ವ್ಯಾಪ್ತಿಯ ಸುಮಾರು 15 ಮಂದಿ ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭಾಗವಹಿಸಿ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರಮಾಣಪತ್ರವನ್ನು ವಿತರಿಸಿದರು.