Tuesday, November 19, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; 3 ಮತ್ತು 4ನೇ ಆರೋಪಿ ಮಂಜುನಾಥ್ ಮತ್ತು ಕೇಶವ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್ – ಕಹಳೆ ನ್ಯೂಸ್

ಪುತ್ತೂರು: ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ ಅಲಿಯಾಸ್ ಮಂಜ ಹಾಗೂ ಕೇಶವ ಪಡೀಲ್ ಇವರ ಪರ ಪುತ್ತೂರಿನ ಪ್ರತಿಷ್ಟಿತ ನ್ಯಾಯವಾದಿಗಳ ಮೂಲಕ  ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೆಲ ದಿನಗಳ ಹಿಂದೆ ಮಾನ್ಯ ಪುತ್ತೂರು‌ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿದ್ದು, ದೂರುದಾರರ ಪರ ಸರ್ಕಾರಿ ಅಭಿಯೋಜಕರಾದ ಜಯಂತಿ ಇವರು ವಾದಮಂಡಿಸಿದ್ದರು.

ಮುಂದಿನ ಬೆಳವಣಿಗೆಯಂತೆ ಹೈಕೋರ್ಟ್ ನ್ಯಾಯವಾದಿಗಳ ಮೂಲಕ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ (high court ) ಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ದೂರುದಾರ ವಿಖ್ಯಾತ್ ಪರ ಹೈಕೋರ್ಟ್ ನ್ಯಾಯವಾದಿಗಳಾದ ರಾಜಶೇಖರ್ ಹಿಲ್ಯಾರ್ ಸುಧೀರ್ಘ ವಾದಮಂಡಿಸಿದ್ದು., ಇದೀಗ ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದೆ, ಅಲ್ಲದೇ ದೂರುದಾರರ ವಿಚಾರಣೆ ಮುಗಿಯುವ ತನಕ ಯಾವುದೇ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸದಂತೆ ಆದೇಶ ಹೊರಪಡಿಸಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು