Monday, January 20, 2025
ಸುದ್ದಿ

ಜೆಡಿಯು ಹಾಗೂ ಬಿಜೆಪಿ ಬಿಹಾರದಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಹಂಚಿಕೊಳ್ಳಲಿವೆ – ಕಹಳೆ ನ್ಯೂಸ್

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಯು ಹಾಗೂ ಬಿಜೆಪಿ ಬಿಹಾರದಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಹಂಚಿಕೊಳ್ಳಲಿವೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಿನ್ನೆ ಹೊಸದಿಲ್ಲಿಯಲ್ಲಿ ಜಂಟಿಯಾಗಿ ಘೋಷಿಸಿದೆ.

ಬೆನ್ನಲ್ಲೇ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ, ವಿರೋಧ ಪಕ್ಷದ ಮುಖಂಡ ತೇಜಸ್ವಿ ಯಾವದ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ರಾಜ್ಯದ ಅರ್ವಾಲ್ ಪ್ರವಾಸಿ ಮಂದಿರದಲ್ಲಿ ಉಭಯ ಮುಖಂಡರು ಪರಸ್ಪರ ಭೇಟಿಯಾಗಿ 15 ನಿಮಿಷಗಳ ಕಾಲ ರಹಸ್ಯ ಚರ್ಚೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು