Wednesday, January 22, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಜೂನ್ 01 ರಿಂದ 3 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ನಿಷೇಧ ; ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಮಂಗಳೂರು :ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿಗಳೂ ಆಗಿರುವ ಜಿಲ್ಲಾದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮ್ಯದದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್‍ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು