Recent Posts

Monday, November 18, 2024
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ – ಕಹಳೆ ನ್ಯೂಸ್

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ.

ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಪು ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಎಸ್‌ಐಟಿ ತಂಡ ಹೊರಟಿದೆ. ಕಾರ್ಯಾಚರಣೆ ವೇಳೆ ಹಾಸನ ನಗರ ಠಾಣೆ ಪೊಲೀಸರು ಎಸ್‌ಐಟಿಗೆ ಸಹಾಯ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಶ್ಲೀಲ ವೀಡಿಯೋಗಳಿದ್ದ ಪೆನ್‌ಡ್ರೈವ್‌ ಹಂಚಿದ ಪ್ರಕಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳಾದ ನವೀನ್‌ಗೌಡ ಹಾಗೂ ಚೇತನ್ ಅವರು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ನಿನ್ನೆ ರಾತ್ರಿಯೇ ಹಾಸನಕ್ಕೆ ಕರೆತಂದಿದ್ದಾರೆ.

ರಾತ್ರಿ 11 ಗಂಟೆಗೆ ಹಾಸನದ ಹಿಮ್ಸ್ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಹಾಸನ ಸೆನ್ ಠಾಣೆಯಲ್ಲಿ ಆರೋಪಿಗಳನ್ನು ಇರಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆ ಬಳಿಕ ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಹಾಸನದ ಐದನೇ ಸಿವಿಲ್ ಹಾಗೂ ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನವೀನ್ ಹಾಗೂ ಚೇತನ್ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಹಿನ್ನೆಲೆ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಕೋರ್ಟ್ಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆದು ನಂತರ ವಿಚಾರಣೆ ಹಾಗೂ ಸ್ಥಳ ಮಹಜರು ನಡೆಸಲು ಎಸ್‌ಐಟಿ ಯೋಜಿಸಿದೆ. ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಇಬ್ವರು ಆರೋಪಿಗಳನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆಯಿದೆ. ಬೇಲೂರು ತಾಲ್ಲೂಕಿನ, ನೆಲ್ಕೆ ಗ್ರಾಮದ ನವೀನ್‌ಗೌಡನ ನಿವಾಸ ಹಾಗೂ ಇದೇ ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿರುವ ನವೀನ್‌ಗೌಡನ ನಿವಾಸಗಳಲ್ಲಿ ಸ್ಥಳ ಮಹಜರು ಮಾಡಲಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 23 ರಂದು ನವೀನ್‌ಗೌಡ ಹಾಗೂ ಇತರರ ವಿರುದ್ಧ ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾಗಿ ಒಂದು ತಿಂಗಳ ಬಳಿಕ ಆರೋಪಿಗಳ ಬಂಧನವಾಗಿದೆ.