Tuesday, January 21, 2025
ಉಡುಪಿದಕ್ಷಿಣ ಕನ್ನಡಸುದ್ದಿ

ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಮೂಲಕ ಭಜನಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ : ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿಯ ಸಮಾಲೋಚನಾ ಸಭೆÀಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟ, ಭಜನಾ ತರಬೇತಿ, ಭಜನಾ ಮಂದಿರಗಳಿಗೆ ಸಹಾಯ ಹಸ್ತದ ಜೊತೆಗೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾರ್ಯಕ್ರಮಗಳು ಭಜನಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ(ರಿ.) ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ಇದರ ಜಿಲ್ಲಾ ಕಛೇರಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ತಾಲೂಕು ಭಜನಾ ಪರಿಷತ್ ಸಮಾಲೋಚನಾ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕೃಷ್ಣನ ನೆಲೆವೀಡು ಉಡುಪಿ ಹಾಗೂ ತಾಲೂಕಿನಾದ್ಯಂತ ಪಸರಿಸಿರುವ ಗರಿಷ್ಠ ಭಜನಾ ಮಂಡಳಿಗಳನ್ನು ಒಗ್ಗೂಡಿಸಿ ಉಡುಪಿ ತಾಲೂಕು ಭಜನಾ ಪರಿಷತ್ತಿನಲ್ಲಿ ನೊಂದಾವಣೆಗೊಳಿಸುವ ಜೊತೆಗೆ ವಿನೂತನ ಕಾರ್ಯಕ್ರಮಗಳ ಮೂಲಕ ಭಜನಾ ಪರಿಷತ್ತನ್ನು ಸದೃಢವಾಗಿ ಬೆಳೆಸುವಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಅವರು ತಿಳಿಸಿದರು.
ಭಜನಾ ಪರಿಷತ್ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ ಪ್ರಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಾದ್ಯoತ ಭಜನಾ ಮಂಡಳಿಗಳನ್ನು ಭಜನಾ ಪರಿಷತ್ ಜೊತೆಗೆ ಸಂಘಟಿಸುವ ಮೂಲಕ ಸಮಾಜದಲ್ಲಿ ಭಜನೆಯನ್ನು ಇನ್ನಷ್ಟು ಪ್ರಚಲಿತಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು