Tuesday, January 21, 2025
ಬೆಂಗಳೂರುಸುದ್ದಿ

ಇಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ; ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ದತೆ-ಕಹಳೆ ನ್ಯೂಸ್

ಬೆಂಗಳೂರು :ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎಂದು ಹೇಳಲಾಗಿದೆ.
ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಲುಫ್ತಾನ್ಸಾ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಅವರು ಟಿಕೆಟ್ ಬುಕ್ ಮಾಡಿದ್ದು, ಈ ವಿಮಾನ ಗುರುವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಈ ಹಿನ್ನೆಲೆಯಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ತಂಡ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿದ್ದು ಪ್ರಜ್ವಲ್ ರೇವಣ್ಣ ಬಂದಿಳಿಯುತ್ತಿದ್ದAತೆ ಅವರನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು