Thursday, April 3, 2025
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಸಿಸಿಬಿಯಿಂದ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಅಕ್ರಮ ʻಬಾಂಗ್ಲಾ ವಲಸಿಗರುʼ ಪತ್ತೆ!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ತಡರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 100ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿದ್ದಾರೆ.

ಗುಪ್ತಚರದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಂಗ್ಲಾ ಗಡಿಭಾಗದಲ್ಲಿ ಸುಸುಳಿ ಅಕ್ರಮವಾಗಿ ಬಂದು ಬೆಂಗಳೂರಿಗೆ ನೆಲೆಸಿದ್ದಾರೆ. ಯಾವುದೇ ಸೂಕ್ತ ದಾಖಲೆ ಇಲ್ಲದೇ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಸದ್ಯ ಇವರನ್ನು ವಶಕ್ಕೆ ಪಡೆದಿರುವ ಪೊಲೀಸರು ಮನೆ ಮಾಲೀಕರನ್ನು ಕೂಡ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ