Wednesday, January 22, 2025
ಉಡುಪಿಸುದ್ದಿ

ನೆಲ್ಲಿಕಟ್ಟೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ನೆಲ್ಲಿಕಟ್ಟೆ ಜ್ಞಾನ ಗಂಗಾ ಪದವಿ ಪೂರ್ವ ಕಾಲೇಜಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರ ಪರವಾಗಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ್ ಪೂಜಾರಿ, ಹರೀಶ್ ಶೆಟ್ಟಿ ಮತ್ತು ಕಾಲೇಜು ಪ್ರಾಂಶುಪಾಲರು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು