Wednesday, January 22, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಜೂನ್.4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಮಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರಂದು ಬೆಳಗ್ಗೆ ಗಂಟೆ 6 ರಿಂದ ಜೂನ್.05 ರ ಬೆಳಗ್ಗೆ ಗಂಟೆ 6.00 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಅದರಲ್ಲಿ ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯಾವುದೇ ಮೆರವಣಿಗೆ, ಸಭೆ-ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡುವ ಮಾರಕಾಸ್ತ್ರಗಳನ್ನು ನಿಷೇಧಿಸಲಾಗಿದೆ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕ ವಸ್ತು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.