ಇಂದಿರಾನಗರದಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಡ್ಡಿಂಗ್ ; ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ – ಕಹಳೆ ನ್ಯೂಸ್
ದೊಮ್ಮಲೂರು ಎರಡನೇ ಹಂತದ ಸ್ಪಾವೊಂದರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮೇ 31 ಸ್ವಾ ಮೇಲೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶ ಮತ್ತು ನಾಗಾಲ್ಯಾಂಡ್ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.
ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಡ್ಡಿಂಗ್ ಸೇವೆಗಳ ಹೆಸರಿನಲ್ಲಿ ಗ್ರಾಹಕರನ್ನು ಬರಮಾಡಿಕೊಂಡು ಲೈಂಗಿಕ ಕ್ರಿಯೆಗೆ ಪುಸಲಾಯಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳು ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿ ಮಣಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.