Monday, January 20, 2025
ಬೆಂಗಳೂರುಸುದ್ದಿ

ಇಂದು ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ : ʻಯೆಲ್ಲೋ, ಆರೆಂಜ್‌ ಅಲರ್ಟ್‌ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದ್ದು, ಪರಿಣಾಮ ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇಂದು ಕರ್ನಾಟಕಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ಅಥವಾ ನಾಳೆ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.