Tuesday, January 21, 2025
ಉಡುಪಿ

ಬೈಕ್ ಗೆ KSRTC ಬಸ್ ಡಿಕ್ಕಿ :ಬೈಕ್ ಸವಾರ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಕೋಟ : ಕೆಎಸ್ಆರ್ ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟ ಬೈಕ್ ಸವಾರ ಕೋಟತಟ್ಟು ಕಲ್ಮಾಡಿ ರಸ್ತೆಯ ಪಾತ್ರಿ ಮಂಜುನಾಥ್ ಗಾಣಿಗರವರ ಪುತ್ರ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಾಸುದೇವ ಗಾಣಿಗರು ರಾತ್ರಿ ಸುಮಾರು 12 ಗಂಟೆಗೆ ತೆಕ್ಕಟ್ಟೆ ಸಾಯಿಗ್ರಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗಲು ಕೋಟ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಶಿರಸಿ ಕಡೆ ಹೋಗುವ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿರುತ್ತದೆ.

ಅಪಘಾತದಲ್ಲಿ ಬೈಕ್ ಸವಾರನಿಗೆ ತೆಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.

ಕೋಟ ಠಾಣೆಯ ಎಎಸ್ಐ ಜಯಪ್ರಕಾಶ್ ಹಾಗೂ ಸಿಬ್ಬಂದಿ ಅಶೋಕ್ ತಕ್ಷಣ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೀವನ್ ಮಿತ್ರ ಆಂಬುಲೆನ್ಸ್ ನಲ್ಲಿ ಕೋಟ ಶವಗಾರಕ್ಕೆ ಸಾಗಿಸಿರುತ್ತಾರೆ.