Wednesday, January 22, 2025
ಉಡುಪಿದಕ್ಷಿಣ ಕನ್ನಡಸುದ್ದಿ

ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಉದ್ಯಾವರ: ಯೋಗೀಶ್ ಎಸ್. ಕೋಟ್ಯಾನ್ ಗ್ರಾಮ ಪಂಚಾಯತ್ ಸದಸ್ಯರು ಉದ್ಯಾವರ ಇವರ ವತಿಯಿಂದ “ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ” ಉದ್ಯಾವರ ಗಣಪತಿ ದೇವಸ್ಥಾನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಿ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಕ್ಷೇತ್ರಾಧ್ಯಕ್ಷರಾದ ವಾಸುದೇವ ಸಾಲ್ಯಾನ್, ಉದ್ಯಮಿಗಳಾದ ಹರೀಶ್ ಭಾರದ್ವಾಜ್, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್, ಉದ್ಯಮಿಗಳಾದ ಹರೀಶ್ ಕುಮಾರ್, ಫ್ರೆಂಡ್ಸ್ ಗಾರ್ಡನ್ (ರಿ.) ಆರೂರು ತೋಟ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಉಪಸ್ಥಿತರಿದ್ದರು.