ಬೆಂಗಳೂರು: ಸರ್ಕಾರದ ಸಬ್ಸಿಡಿ ಮತ್ತು ಇತರೆ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಆಧಾರ್ ಇ-ಕೆವೈಸಿ ಬಳಸುವಂತೆ ಬ್ಯಾಂಕ್ ಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ) ಹೇಳಿದೆ.
ಸರ್ಕಾರದ ಕಲ್ಯಾಣ ಯೋಜನೆಗಳನ್ನು ಹೊರತುಪಡಿಸಿ ಇತರೆ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದ ನಂತರ ಬ್ಯಾಂಕ್ ಗಳು ಕಾನೂನು ಸಲಹೆ ಕೇಳಿ ಯುಐಡಿಎಐಗೆ ಪತ್ರ ಬರೆದಿದ್ದವು.
ಈ ಸಂಬಂಧ ಕಳೆದ ವಾರ ಬ್ಯಾಂಕ್ ಗಳಿಗೆ ಪತ್ರ ಬರೆದಿರುವ ಯುಐಡಿಎಐ, ಯಾವುದಕ್ಕೆ ಮತ್ತು ಯಾವ ಸನ್ನಿವೇಶದಲ್ಲಿ ಆಧಾರ್ ಬಳಸಬಹುದು ಎಂಬುದರ ಬಗ್ಗೆ ವಿವರಣೆ ನೀಡಿದೆ.