Wednesday, January 22, 2025
ಬೈಂದೂರುಸುದ್ದಿ

ಟ್ರಾನ್ಸ್‌ಫಾರ್ಮರ್ ರಿಪೇರಿ ವೇಳೆ ವಿದ್ಯುತ್ ಶಾಕ್ ನಿಂದ ಲೈನ್‌ಮ್ಯಾನ್ ಸಾವು–ಕಹಳೆ ನ್ಯೂಸ್

ಬೈಂದೂರು : ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ಸಂದರ್ಭ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ.ಇಂದು ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.ಸಲೀಂ (38) ಮೃತಪಟ್ಟ ದುರ್ದೈವಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.ವಿವಾಹಿತರಾಗಿರುವ ಇವರು ಎರಡು ತಿಂಗಳ ಮಗು ಹೊಂದಿದ್ದಾರೆ.ಬೈಂದೂರು ಪರಿಸರದ ಜನಸ್ನೇಹಿ ಲೈನ್‌ಮ್ಯಾನ್ ಆಗಿರುವ ಇವರು ಅಕಾಲಿಕ ನಿಧನ ಅಘಾತ ಉಂಟು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು