Saturday, September 21, 2024
ಉಡುಪಿಚಿಕ್ಕಮಂಗಳೂರುಸುದ್ದಿ

ಕರಾವಳಿಯಲ್ಲಿ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭ : ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ/ ಮಂಗಳೂರು : ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮೊದಲಿಗೆ ನಡೆಯುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶದ ಕುರಿತು ಅಂದಾಜು ಅಂಕಿ-ಅಂಶಗಳು ಬಹಿರಂಗವಾಗಲಿದೆ.

ಲೋಕಸಭೆ ಚುನಾವಣೆಗೆ ಅಂಚೆ ಮತಪತ್ರಗಳು ಮತ್ತು ಇವಿಎಂಗಳನ್ನು ಹೊಂದಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ಏಜೆಂಟರು ಮತ್ತು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ದಕ್ಷಿಣ ಕನ್ನಡ ಕ್ಷೇತ್ರ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಅಂಚೆ ಮತ ಎಣಿಕೆಯಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ (78) ಮುನ್ನಡೆ (ಜಯಪ್ರಕಾಶ್ ಹೆಗ್ಡೆ – 45 ಅಂಚೆ ಮತ) ಸಾಧಿಸಿದ್ದಾರೆ.

ಜಾಹೀರಾತು

ರಾಜ್ಯದ ದಕ್ಷಿಣ ಕನ್ನಡ ಕ್ಷೇತ್ರ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಲೋಕಸಭಾ ಚುನಾವಣೆಯ ಇವಿಎಂ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. ಮೋದಿ ನೇತೃ‌ತ್ವದ ಎನ್‌ಡಿಎ ‘ಹ್ಯಾಟ್ರಿಕ್‌‘ ಗೆಲುವಿನ ವಿಶ್ವಾಸದಲ್ಲಿದ್ದರೆ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದೆ.‌

2024ರ ಸಾರ್ವತ್ರಿಕ ಚುನಾವಣೆ ಏಪ್ರಿಲ್ 19ರಿಂದ ಜೂನ್ 1ರ ವರೆಗೆ 7ಹಂತಗಳಲ್ಲಿ ನಡೆದಿದೆ. ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ