Sunday, January 19, 2025
ಮೈಸೂರುಸುದ್ದಿ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಬಯರ್ಥಿ ಯದವೀರ್‌ ಒಡೆಯರ್‌ ಗೆ ಭಾರೀ ಮುನ್ನಡೆ – ಕಹಳೆ ನ್ಯೂಸ್

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು , ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. 6223 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.