Tuesday, January 21, 2025
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಹಿಂದುತ್ವದ ಭದ್ರಕೋಟೆಯಲ್ಲಿ‌ ಮತ್ತೆ ಅರಳಿದ ಕಮಲ ; ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಭರ್ಜರಿ ಗೆಲುವು ; ಸಂಭ್ರಮಾಚರಣೆ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಪರಾಭವಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ‌ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಫಲಿತಾಂಶದ ಆರಂಭದಿಂದಲೂ ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಅವರು ಮುನ್ನಡೆಯನ್ನು ಸಾಧಿಸಿಕೊಂಡು ಬಂದಿದ್ದು ಕೊನೆಯ ಹಂತದಲ್ಲಿ ಕಾಂಗ್ರೆಸ್ ನ ಪದ್ಮರಾಜ ಆರ್. ಪೂಜಾರಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳಿಗಿಂತ ಮುನ್ಮಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ ಇದರ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಪಕ್ಷದ ಮುಖಂಡರು , ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಮತ ಎಣಿಕ ಕೇಂದ್ರದ ಎದುರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.