Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆ ಮಹಡಿಗೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿ ಕೆಳಗೆ ಬಿದ್ದು ಸಾವು-ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಂದರ ಮಹಡಿಗೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ( 45) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಕೂಡಲೇ ತುಂಬೆ ಫಾದರ್ ಮುಲ್ಲರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಮ್ಟಾಡಿ ಗ್ರಾ.ಪಂ.ಸದಸ್ಯನಾಗಿದ್ದ ಇವರು ಸಾಮಾಜಿಕವಾಗಿ ಉತ್ತಮ ಕೆಲಸಗಾರನಾಗಿದ್ದರು ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂರು ಮಂದಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬಿದ್ದ ಪರಿಣಾಮ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ್ ದಾರಿ ಮಧ್ಯೆ ಸಾವನ್ನಪ್ಪಿದ ಬಗ್ಗೆ ತಿಳಿಸಿದ್ದಾರೆ. ಉಳಿದಂತೆ ಇನ್ನಿಬ್ಬರು ಕೆಲಸಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು