Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ ; ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು.

ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು. ಎಲ್ಲಾ ಶೋರೂಮ್‌ಗಳಲ್ಲಿ ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳನ್ನು ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಳಿಯ ಜ್ಯುವೆಲ್ಸ್ ಸಂಸ್ಥೆ ಕೇವಲಚಿನ್ನಾಭರಣಗಳ ಮಾರಾಟದಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ, ಬದಲಾಗಿ ಮುಳಿಯ ಫೌಂಡೇಶನ್, ಮುಳಿಯ ಪ್ರಾಪರ್ಟೀಸ್‌ನಂತಹ ಸಂಸ್ಥೆಗಳ ಮೂಲಕ ಸಾರ್ವಜನಿಕ ಕಾಳಜಿಯ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದು, ಈ ಕಾರ್ಯಕ್ರಮಗಳ ಸಾಲಿನಲ್ಲಿ ವೃಕ್ಷಾರೋಪಣವೂ ಸೇರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾರುಕಟ್ಟೆ ಮುಖ್ಯಸ್ಥ ಸಂಜೀವ, ಪ್ಲೋರ್ ಮ್ಯಾನೇಜರ್ ಯತೀಶ್, ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.