Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಕುಂಪಲದಲ್ಲಿ ಪಟಾಕಿ ಸಿಡಿಸಿದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಂದ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ – ಕಹಳೆ ನ್ಯೂಸ್

ಉಳ್ಳಾಲ : ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ.

ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಇಂದು ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಗೌತಮ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಇದರಿಂದ ಪಟಾಕಿ ಸಿಡಿಸಿದ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ವೈರಲ್ ಆಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಉಳ್ಳಾಲ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು