ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ-ಕಹಳೆ ನ್ಯೂಸ್
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಕ್ರಮಕ್ಕೆ ಸರಕಾರಕ್ಕೆ ನಿರ್ದೇಶನ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ರಾಜಭವನಕ್ಕೆ ಪ್ರತಿಭಟನೆಯ ಮೂಲಕ ಕಾಲ್ನಡಿಗೆಯಲ್ಲಿ ತೆರಳಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಪ್ರಮುಖ ನಾಯಕರುಗಳಾದ ಕೆ .ಗೋಪಾಲಯ್ಯ , ಅಶ್ವಥ್ ನಾರಾಯಣ, ಬೈರತಿ ಬಸವರಾಜ್ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ರವಿಕುಮಾರ್ , ಸಪ್ತಗಿರಿ ಗೌಡ,ಮತ್ತು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.