ಬೆಂಗಳೂರು: ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದರೂ ಇದೀಗ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಇದರಿಂದಾಗಿ 2017 ರ ನವೆಂಬರ್ ನಿಂದ ಈವರೆಗೆ ಒಟ್ಟು ಆರು ಬಾರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಮುಂದೂಡಿದಂತಾಗಿದ್ದು, ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ವರ್ಗಾವಣೆಗೆ ಅನುಸರಿಸಬೇಕಾದ ಮಾನದಂಡಗಳ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಸ್ಪಷ್ಟತೆ ಹೊಂದಿಲ್ಲದಿರುವುದು, ಸಾಫ್ಟ್ವೇರ್‌ನಲ್ಲಿನ ದೋಷ ಸೇರಿದಂತೆ ಹಲವು ಕಾರಣಗಳಿಂದಾಗಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಈ ಬಾರಿ ಮುಂದೂಡಿಕೆಯಾಗಿದೆ.