Recent Posts

Monday, January 27, 2025
ಕಾಪುಸುದ್ದಿ

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ನಾಪತ್ತೆಯಾಗಿದ್ದ ಯುವಕ : ಮೃತದೇಹ ಕಡೆಕಾರು-ಪಡುಕೆರೆ ಬಳಿಯ ಸಮುದ್ರದಲ್ಲಿ ಪತ್ತೆ – ಕಹಳೆ ನ್ಯೂಸ್

ಕಾಪು : ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ಯುವಕ ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಇಂದು ಸಂಜೆ ವೇಳೆ ಪತ್ತೆಯಾಗಿದೆ.

ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕರಣ್ ಸಾಲ್ಯಾನ್ ರವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಇಂದು ಮುಂಜಾನೆ ಪತ್ತೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

   

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ತಂದೆ ತುಳಸಿ ಸಾಲ್ಯಾನ್‌ರವರು ಕಾಪು ಠಾಣೆಗೆ ದೂರು ನೀಡಿದ್ದು, ಸ್ಥಳೀಯರು, ಈಜುಗಾರರು ಶುಕ್ರವಾರ ಬೆಳಗಿನಿಂದಲೇ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕಾಪುವಿನ ಸಮಾಜಸೇವಕ ಸೂರಿ ಶೆಟ್ಟಿಯವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.

ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.