Recent Posts

Monday, January 27, 2025
ಕುಂದಾಪುರಕ್ರೈಮ್ಸುದ್ದಿ

ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಸೆರೆ- ಕಹಳೆ ನ್ಯೂಸ್

ಕುಂದಾಪುರ : ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಯನ್ನು ಅಮಾಸೆಬೈಲು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶ್ರೇಯಸ್ ನಾಯ್ಕ್ (25) ಬಂಧಿತ ಆರೋಪಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೇ 18ರಂದು ಅಮಾಸೆಬೈಲು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದ್ದು ದೂರು ದಾಖಲಾಗು ತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆಗೆ ತಂಡ ರಚಿಸಿದ್ದು ಖಚಿತ ಮಾಹಿತಿಯಂತೆ ಜೂ.7ರಂದು ಬಂಧಿಸಿದ್ದಾರೆ.