Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಸ್ಸಿನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ : ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಮಂಗಳೂರು : ಬಸ್‍ನಲ್ಲಿ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕನೋರ್ವ ಮಾನಭಂಗ ಮಾಡುವ ಉದ್ದೇಶದಿಂದ ಕಿರುಕುಳ ನೀಡಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಪೆನಿಯೊಂದರ ಪ್ರಾಡಕ್ಟ್ ಸೇಲ್ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿ ಕಚೇರಿಗೆ ಹೋಗಿ ಪ್ರಾಡಕ್ಟ್ ಗಳನ್ನು ತೆಗೆದುಕೊಂಡು ಮಾರಾಟ ಮಾಡಲು ನಾಗುರಿಯಿಂದ ಬಸ್‍ನಲ್ಲಿ ಬೆಳಗ್ಗೆ ಸ್ಟೇಟ್ ಬ್ಯಾಂಕ್‍ಗೆ ಬಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಟೇಟ್ ಬ್ಯಾಂಕ್‍ನಿಂದ ಬಜಪೆ ಕಡೆಗೆ ಹೋಗಲು ಖಾಸಗಿ ಬಸ್‍ನಲ್ಲಿ ಕುಳಿತಿದ್ದರು. ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಸುಮಾರು 27ರಿಂದ 28 ವರ್ಷ ವಯಸ್ಸಿನ ಯುವಕ ಆಕೆಯ ಹಿಂಬದಿಯ ಸೀಟಿನಲ್ಲಿ ಕುಳಿತು ಮಾನಭಂಗ ಮಾಡುವ ಉದ್ದೇಶದಿಂದ ಸೊಂಟಕ್ಕೆ ಕೈ ಹಾಕಿ ಎಳೆದಿದ್ದಾನೆ ಎಂದು ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು