Recent Posts

Friday, November 15, 2024
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೊಳಿಯಾರ್ ಚೂರಿ ಇರಿತ ಪ್ರಕರಣ : “ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು” : ಶಾಸಕ ವೇದವ್ಯಾಸ ಕಾಮತ್ ಆಗ್ರಹ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಕಾರ್ಯಕರ್ತರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು.

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭವನ್ನು ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಪಕ್ಷದ ವತಿಯಿಂದ ಎಲ್ಲೆಡೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅದರಂತೆ ತಮ್ಮ ಪಾಡಿಗೆ ಬೋಳಿಯಾರ್‍ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ವಿನಾಕಾರಣ ದುಷ್ಕರ್ಮಿಗಳ ತಂಡ ಮಾರಣಾಂತಿಕ ದಾಳಿ ನಡೆಸಿ ಪರಾರಿಯಾಗಿದ್ದು, ಜಿಲ್ಲೆಯಲ್ಲಿ ಕೇರಳ ಹಾಗೂ ಪ. ಬಂಗಾಳ ಮಾದರಿಯ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ, ಗೂಂಡಾ ಕಾಯ್ದೆ ಸೇರಿದಂತೆ ದೌರ್ಜನ್ಯ ಮುಂದುವರಿದಿದ್ದು ಇದೀಗ ಚೂರಿ ಇರಿತ, ಮಾರಣಾಂತಿಕ ಹಲ್ಲೆಯ ಮಟ್ಟಕ್ಕೆ ತಲುಪಿ ಕಾಂಗ್ರೆಸ್ ಆಡಳಿತದಲ್ಲಿ ನ್ಯಾಯವೇ ಇಲ್ಲವಾಗಿದೆ. ಇಂತಹ ರಾಜಕೀಯ ದ್ವೇಷದ ಹಲ್ಲೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಯ ಅಶಾಂತಿಗೆ ಕಾರಣವಾಗಲಿದ್ದು ಕೂಡಲೇ ಪೆÇಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಶಾಸಕರು ಎಚ್ಚರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು