Sunday, January 19, 2025
ದಕ್ಷಿಣ ಕನ್ನಡಸುದ್ದಿ

ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಮಯಂಕ್ ಅಗರವಾಲ್ – ಕಹಳೆ ನ್ಯೂಸ್

ಮಂಗಳೂರು: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಮಯಂಕ್ ಅಗರವಾಲ್ ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಅಶಿತಾ ಸೂದ್ ಜೊತೆ ಕಟೀಲು ದೇವಸ್ಥಾನಕ್ಕೆ ತೆರಳಿದ ಅವರು ಅಕ್ಕಿ, ಬೆಲ್ಲ. ಅರಶಿನ ಒಳಗೊಂಡ ಮಡಿಲಕ್ಕಿಯನ್ನು ದೇವಿಗೆ ಸಮರ್ಪಿಸಿದರು. ಅನುವಂಶಿಕ ಅರ್ಚಕರಾದ ಕುಮಾರ್ ಅಸ್ರಣ್ಣ ಅವರು ವಸ್ತ್ರ ಮತ್ತು ಪ್ರಸಾದ ನೀಡಿ ಮಯಂಕ್‍ಗೆ ಗೌರವ ಸಲ್ಲಿಸಿದರು. ಅನುವಂಶಿಕ ಮೊಕ್ತೇಸರ ವಾಸುದೇವ ಅಸ್ರಣ್ಣ, ಟ್ರಸ್ಟಿ ವೆಂಕಟರಮಣ ಅಸ್ರಣ್ಣ ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಉಡುಪಿ ಜಿಲ್ಲೆ ಕುಂದಾಪುರದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಮತ್ತು ಮಾರಣಕಟ್ಟೆಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.