Recent Posts

Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆ : ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿಯಾಗಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಿಡಿಲಿನಿಂದ ಹಾನಿಗೊಳಗಾದ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಬೋಳೂರು, ರಾಹುಲ್ ಶೆಟ್ಟಿ, ಬೋಳೂರು ಜಯಲಕ್ಷ್ಮಿ ಫ್ರೆಂಡ್ಸ್ ನ ಜೀವನ್ ತಲ್ವಾರ್, ಸೇರಿದಂತೆ ದೈವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.