Recent Posts

Monday, January 20, 2025
ಸುದ್ದಿ

ದುನಿಯಾ ವಿಜಯ್ ಪತ್ನಿ ಮೇಲೆ ಹಲ್ಲೆ ಪ್ರಕರಣ: ನಾಗರತ್ನ ಬಂಧನವಾಗುವ ಸಾಧ್ಯತೆ – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ಅವರ ಬಂಧನವಾಗುವ ಸಾಧ್ಯತೆ ಇದೆ.

ನಾಗರತ್ನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಇಂದು ಅವರನ್ನು ಬಂಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಗರತ್ನ ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜಿ ಜೈಲಿನಲ್ಲಿದ್ದಾಗ ಏಕಾಏಕಿ ಕೀರ್ತಿಗೌಡ ಮನೆಗೆ ನುಗ್ಗಿದ ನಾಗರತ್ನ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಸಿಸಿ ಟಿವಿ ದೃಶ್ಯಾವಳಿಯಿಂದ ಪ್ರಕರಣ ಇನ್ನು ಗಂಭೀರತೆ ಪಡೆದುಕೊಂಡಿದೆ. ಸದ್ಯ ನಾಗರತ್ನ ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.