ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಹೆಚ್.ಡಿ. ಕುಮಾರಸ್ವಾಮಿ ಇಂದು ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್
ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿದ್ದಾರೆ.
ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ. ಕುಮಾರಸ್ವಾಮಿ, ಪ್ರಧಾನಿ ಮೋದಿಯವರು ಖಾತೆ ಹಂಚಿಕೆ ಮಾಡಿದ್ದಾರೆ. ಕೃಷಿ ಖಾತೆ ಸಿಗುವ ನಿರೀಕ್ಷೆ ಇತ್ತು. ಮೋದಿಯವರು ದೇಶದ ಅಭಿವೃದ್ಧಿಗೆ ಪೂರಕವಾಗಿ ಖಾತೆ ನೀಡಿದ್ದಾರೆ. ಜೂನ್ 11ರಂದು ಸಂಜೆ 5 ಗಂಟೆಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ವಿಶ್ವಾಸವಿಟ್ಟು ಖಾತೆ ಹಂಚಿಕೆ ಮಾಡಿದ್ದು, ಕನ್ನಡಿಗರ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ಹೇಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.