Friday, April 11, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ :ದೇರಳಕಟ್ಟೆಯ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ವೇದವ್ಯಾಸ ಕಾಮತ್ –ಕಹಳೆ ನ್ಯೂಸ್

ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ಹಾಗೂ ಇರಿತಕ್ಕೊಳಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಕಾಂಗ್ರೆಸ್ ಆಡಳಿತದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಹಾಕುವುದು ಕೂಡಾ ಅಪರಾಧವೇ…? ಹಲ್ಲೆ ನಡೆಸಿದ ದುಷ್ಕರ್ಮಿಗಳ ಜೊತೆಗೆ ಬಿಜೆಪಿ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ?. ಸರ್ಕಾರವು ಕೊನೆಪಕ್ಷ ಇಂತಹ ಪ್ರಕರಣಗಳಲ್ಲಾದರೂ ಓಲೈಕೆ ರಾಜಕಾರಣವನ್ನು ಬಿಟ್ಟು ನಿಷ್ಪಕ್ಷವಾದ ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯಕುಮಾರ್ ಶೆಟ್ಟಿ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ರಾಜೇಂದ್ರ ಶೆಟ್ಟಿ, ಕಿರಣ್ ರೈ, ಮುಂತಾದ ಪ್ರಮುಖರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ