Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯೊಂದರ ಕಂಪೌಂಡ್ ಜರಿದು ಬಿದ್ದು ಪಾದಾಚಾರಿಗಳಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಂದರ ಕಂಪೌಂಡ್ ಜರಿದು ಬಿದ್ದು ಪಾದಾಚಾರಿಗಳಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುರಸಭಾ ವ್ಯಾಪ್ತಿಯ ಗುಡ್ಡೆಯಂಗಡಿ ಎಂಬಲ್ಲಿ ಜೂನ್ 11 ರಂದು ಮಧ್ಯ ರಾತ್ರಿ ವೇಳೆ ನಡೆದಿದೆ.

ಗುಡ್ಡೆಯಂಗಡಿ ನಿವಾಸಿಗಳಾದ ಮಹಮ್ಮದ್ ಸಾಧಿಕ್, ಮಹಮ್ಮದ್ ರಫೀಕ್ ಎಂಬವರು ಗಾಯಗೊಂಡವರಾಗಿದ್ದು, ಇಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗಾಗಿ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದರಲ್ಲಿ ಮಹಮ್ಮದ್ ಸಾಧಿಕ್ ಅವರಿಗೆ ಗಂಭೀರವಾಗಿ ಗಾಯವಾಗಿದ್ದು ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಗುಡ್ಡೆಯಂಗಡಿ ಅಬ್ದುಲ್ ರಹಮಾನ್ ಎಂಬವರ ಮನೆಯ ಕಂಪೌಂಡ್ ರಾತ್ರಿ ಸುರಿದ ಮಳೆಗೆ ರಸ್ತೆಗೆ ಬಿದ್ದಿದೆ. ಮಧ್ಯ ರಾತ್ರಿ ಸುಮಾರು 12 ಗಂಟೆ ವೇಳೆ ಲಾರಿ ನಿಲ್ಲಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಂಪೌಂಡ್ ಜರಿದು ಬಿದ್ದು ಇವರಿಬ್ಬರಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಬೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು