Tuesday, April 8, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ : ಕಾರಿನಲ್ಲಿದ್ದ ತಂಡವನ್ನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು! – ಕಹಳೆ ನ್ಯೂಸ್

ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ನಡೆಸುತ್ತಿದ್ದ ಬಗ್ಗೆ ವರದಿಯಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಘಟನೆ ನಡೆದಿದೆ.

ಅನ್ಯಕೋಮಿನ ಯುವಕರು ಹಾಗೂ ಹಿಂದೂ ಯುವತಿಯಿದ್ದ ಐಬಿಎಂಡಬ್ಲ್ಯೂ ಕಾರು ಮುಕ್ಕ ಸಮೀಪ ಸ್ಕೂಲ್ ಬಸ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ತಂಡ ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಕಾರು ಕೈ ಕೊಟ್ಟಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಂತೆ ಇದು ಅನ್ಯಕೋಮಿನ ಜೋಡಿ ಎಂದು ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಠಾಣೆಗೆ ಯುವತಿಯ ಪೋಷಕರನ್ನು ಕರೆಸಿ ಆಕೆಯನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ