Recent Posts

Friday, November 22, 2024
ಕಾಪುಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳೊಂದಿಗೆ ಸಭೆ :ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಭಂದಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಶಾಸಕರು ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು ಮತ್ತು ಪಡುಬಿದ್ರಿ ಹಾಗೂ ಕಟಪಾಡಿ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ ಬ್ಯಾರಿಗೇಟ್ ಹಾಗೂ ರಿಫ್ಲೆಕ್ಟರ್ ಗಳನ್ನು ಅಳವಡಿಸುವಂತೆ ಮತ್ತು ಹೆಜಮಾಡಿಯ ಕನ್ನಂಗಾರ್ ಸುಜ್ಲಾನ್ ಗೇಟ್ ಬಳಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಮತ್ತು ರಾಷ್ಟ್ರೀಯ ಹೆದ್ದಾರಿಯ ಚರಂಡಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಹಾಗೂ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಗ್ಯಾಸ್ ಪೈಪ್ ಲೈನ್ ಗುಂಡಿಗಳನ್ನು ತೆಗೆದಿದ್ದು ಮಳೆಗಾಲ ಸಮಯದಲ್ಲಿ ಇದರಲ್ಲಿ ನೀರು ತುಂಬಿ ಅಪಘಾತ ಸಂಭವಿಸುತ್ತದೆ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕುಮಾರ್, ರಾಷ್ಟ್ರೀಯ ಹೆದ್ದಾರಿ ಸಂಭಂದಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.