Thursday, November 14, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ. ಕಂಗಾಲಾದ ಪ್ರಯಾಣಿಕರು – ಕಹಳೆ ನ್ಯೂಸ್

ಚಾರ್ಮಾಡಿ: ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ.

ಅದೇ ರೀತಿ ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ, ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆಯನ್ನು ಕಂಡು ಗಾಬರಿಗೊಂಡಿದ್ದಾರೆ, ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ನಿಂತ ಕಾಡಾನೆ ಬಳಿಕ ಅರಣ್ಯಕ್ಕೆ ಪ್ರವೇಶ ಮಾಡಿದೆ ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಎರಡು ತಿಂಗಳಿನಿಂದ ಕಾಡಾನೆಯೊಂದು ಈ ಪರಿಸರದಲ್ಲಿ ಬೀಡು ಬಿಟ್ಟಿದ್ದು ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ ಅಲ್ಲದೆ ಪಕ್ಕದ ಗ್ರಾಮಗಳಿಗೂ ದಾಳಿ ಮಾಡಿದೆ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದಷ್ಟು ಬೇಗ ಕಾಡಾನೆಯನ್ನು ಸ್ಥಳಾಂತರಿಸುವಂತೆ ಇಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.