Sunday, January 19, 2025
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಕೊಲೆ ಕೇಸ್ ನಲ್ಲಿ ಡಿ ಗ್ಯಾಂಗ್.. ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ಹಿಂದಿನ ಸಾಕಷ್ಟು ಪ್ರಕರಣ ಉಲ್ಲೇಖಿಸಿ ದರ್ಶನ್ ವಿರುದ್ಧ ರೌಡಿ ಶೀಟ್ ಒಪನ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

ದರ್ಶನ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟಕ ರಹಸ್ಯಗಳು ಹೊರಬರುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಸಾಧ್ಯತೆಯಿದೆ ಇದೆ ಅಂತ ಪೊಲೀಸ್ ಮೂಲಗಳು ಹೇಳುತ್ತಿದೆ. ಸಾಮಾನ್ಯವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮೇಲೆ ರೌಡಿ ಶೀಟ್ ಓಪನ್ ಆಗುವ ಸಾಧ್ಯತೆ ಇದೆ. ಈ ಹಿಂದೆ ಮೈಸೂರಿನ ಹೊಟೇಲ್ ಒಂದರಲ್ಲಿ ಸಪ್ಲೈಯರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದ.

ಬೆಂಗಳೂರಿನ ಪಬ್ ಒಂದರಲ್ಲಿ ಅಭಿಮಾನಿ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ದರು. ಹೀಗೆ ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗ್ತಿರೋ ಹಿನ್ನೆಲೆ ರೌಡಿ ಶೀಟರ್ ಓಪನ್ ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ. ದರ್ಶನ್ ವಿರುದ್ಧ ಹಳೆ ಕೇಸ್ ಗಳ ಪರಿಶೀಲನೆ ನಡೆಸಿ ರೌಡಿ ಪಟ್ಟಿಯಲ್ಲಿ ಸೇರಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.