Recent Posts

Friday, November 22, 2024
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರೇವ್ ಪಾರ್ಟಿ ಪ್ರಕರಣ : ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು : ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌

ರೇವ್ ಪಾರ್ಟಿ ಪ್ರಕರಣದಲ್ಲಿ ಹೇಮಾರನ್ನ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲವು ದಿನಗಳ ಹಿಂದೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ನಟಿ ಭಾಗಿಯಾಗಿದ್ದರು. ನಾನು ಬೆಂಗಳೂರಿನಲ್ಲಿ ಇಲ್ಲ, ಹೈದರಾಬಾದ್‌ನಲ್ಲಿದ್ದೇನೆ ಎಂದು ವಿಡಿಯೋ ಮಾಡಿ ನಟಿ ದಿಕ್ಕು ತಪ್ಪಿಸಿದ್ದರು ಎಂಬ ಆರೋಪವೂ ಕೇಳಿಬಂತು. ಬಳಿಕ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಹಿನ್ನಲೆ ನಟಿಗೆ 2 ಬಾರಿ ಪೊಲೀಸರು ನೋಟಿಸ್‌ ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜೂನ್ 14ರವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು.