Sunday, January 19, 2025
ಕಾಸರಗೋಡು

ಆಪತ್ಕಾಲದಲ್ಲಿ ಆಪತ್ಭಾಂದವರಾಗುವ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ಶ್ಲಾಘನೀಯ : ಕಾಸರಗೋಡು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಶ್ವತ್ ಲಾಲ್ ಬಾಗ್ – ಕಹಳೆ ನ್ಯೂಸ್

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೈವಳಿಕೆಯ ಲಾಲ್ ಬಾಗ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಅಶ್ವತ್ ಪೂಜಾರಿ ಲಾಲ್ ಬಾಗ್ ರವರು ವಹಿಸಿ ಮಾತನಾಡುತ್ತಾ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ನಮ್ಮ ಊರಿನಲ್ಲಿ ಉದ್ಘಾಟನೆಗೊಂಡಿದ್ದು ನಮ್ಮ ಊರಿಗೆ ಹೆಮ್ಮೆ ಹಾಗೂ ನಮ್ಮ ಊರಿನಲ್ಲಿ ಶೌರ್ಯ ಸ್ವಯಂ ಸೇವಕರು ಉತ್ತಮ ಗುಣಮಟ್ಟದ ಸೇವೆಗಳನ್ನು ನೀಡಲಿ ಎಂದು ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಕಾರ್ಯಕ್ರಮಗಳ ಯೋಜನಾಧಿಕಾರಿ ಗಣೇಶ್ ಆಚಾರ್ಯ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಸ್ವಯಂ ಸೇವಕರಿಗೆ ಸಮವಸ್ತ್ರ ವಿತರಣೆ ಮಾಡಿ ಶೌರ್ಯ ಘಟಕದ ನಿಯಮಾವಳಿಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಉಡುಪಿ- ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕರಾಕ ನಿತೇಶ್ ಕೆ, ಘಟಕ ಪ್ರತಿನಿಧಿ ಸುನಿಲ್ ಉಪಸ್ಥಿತರಿದ್ದರು . ಸೇವಾ ಪ್ರತಿನಿಧಿ ಶಿವರಾಮ್ ಸ್ವಾಗತಿಸಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು,