Friday, September 20, 2024
ಕಾರ್ಕಳಶಿಕ್ಷಣಸುದ್ದಿ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕೇಂದ್ರಗಳ ಭೇಟಿ – ಕಹಳೆ ನ್ಯೂಸ್

ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಯನ್ನು ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಗೆ ಭೇಟಿ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೈಗಾರಿಕಾ ಭೇಟಿ, ರಾಷ್ಟ್ರೀಯ ಸೇವಾ ಯೋಜನೆ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದು ಈ ಸಂಸ್ಥೆಯ ವಿಶೇಷ. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಉಮೇಶ್, ಚಂದ್ರಕಾಂತ್, ಮಹೇಶ್ ಶೆಣೈ, ಸುಧಿಕ್ಷಾ ಪೈ, ಕೃಪಾ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು