ಪೋಕ್ಸೋ ಕೇಸ್ : ಬಿಎಸ್‌ವೈ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ! – ಕಹಳೆ ನ್ಯೂಸ್
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯೆತೆಯಿದೆ ಎಂದು ಸಿಐಡಿ ಅಧಿಕಾರಿ ಮೂಲಗಳು ತಿಳಿಸಿವೆ.
ಪೋಕ್ಸೋ ಪ್ರಕರಣ ಕೈಗೆತ್ತಿಕೊಂಡಿದ್ದ ಸಿಐಡಿ ಬಂಧನ ವಾರಂಟ್ ಕೋರಿ ಹೈಕೋರ್ಟ್‌ಗೆ (Karnataka Highcourt) ಇಂದು (ಗುರುವಾರ) ಅರ್ಜಿ ಸಲ್ಲಿಸಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿಗೆ ಆದೇಶಿಸಿತು.
ಕೋರ್ಟ್‌ನಲ್ಲಿ ವಾದ ಪ್ರತಿವಾದ ಹೇಗಿತ್ತು?: ಸಿಐಡಿ (CID) ಪರ ವಾದ ಮಂಡಿಸಿದ್ದ ಎಸ್‌ಪಿಪಿ ಅಶೋಕ್ ನಾಯಕ್, ನ್ಯಾಯಾಧೀಶರ ಮುಂದೆ ದೂರಿನ ಸಾರಾಂಶವನ್ನು ಓದಿದರು. ಅಲ್ಲದೇ ಯಡಿಯೂರಪ್ಪ ಅವರು ದೆಹಲಿಯಲ್ಲಿ ಇರುವುದಾಗಿ ಹೇಳಿದ್ದು, ಜೂನ್ 17 ರಂದು ವಿಚಾರಣೆ ಬರುತ್ತೀನಿ ಅಂತ ಹೇಳಿರೋದು ಪ್ರಾಮಾಣಿಕ ಹೇಳಿಕೆ ಅಲ್ಲ. ಅವರ ಲೋಕೇಷನ್ ಪತ್ತೆ ಆಗುತ್ತಿಲ್ಲ, ಇಂತಹ ಸಂದರ್ಭದಲ್ಲಿ ತನಿಖಾಧಿಕಾರಿಯಾಗಿ ಅರೆಸ್ಟ್ ಮಾಡುವ ಕ್ರಮ ಮಾಡಲೇಬೇಕಾಗಿದೆ ಎಂದು ಹೇಳಿದ್ದಾರೆ.
ವಿಕ್ಟೀಮ್ಸ್ ಅನ್ನು ಖರೀದಿ ಮಾಡೋದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಆರೋಪಿ ಬಾರಿ ಪ್ರಭಾವಿಯಾಗಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದವರು, ಅವರ ಮಗ ಪಕ್ಷವೊಂದರ ರಾಜ್ಯಾಧ್ಯಕ್ಷರಾಗಿದ್ದು, ಶಾಸಕರೂ ಆಗಿದ್ದಾರೆ. ಇನ್ನೋಬ್ಬ ಮಗ ಎಂಪಿ ಇಷ್ಟೇಲ್ಲಾ ಪ್ರಭಾವ ಇರುವ ವ್ಯಕ್ತಿಯನ್ನು ಪತ್ತೆ ಹಚ್ಚೋದು ಕಷ್ಟ. ಈಗಾಗಲೇ ಅವರ ಲೊಕೇಷನ್ ಪತ್ತೆಯಾಗ್ತಾ ಇಲ್ಲ ಎಂದು ವಾದ ಮಂಡಿಸಿದರು. ಬಳಿಕ ಇಷ್ಟೆಲ್ಲ ಆಧಾರ ಇದ್ದರೂ ಯಾಕೆ ಅವರನ್ನ ಕೂಡಲೇ ಬಂಧನ ಮಾಡಿಲ್ಲ ಎಂದು ನ್ಯಾಯಾಧೀಶರಿಂದ ಎಸ್‌ಪಿಪಿಗೆ ಪ್ರಶ್ನೆ ಮಾಡಿದರು. ಆಗ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಾಗುತ್ತಿತ್ತು ಎಂದು ಎಸ್‌ಪಿಪಿ ಉತ್ತರಿಸಿದರು.
ಇದೀಗ ಸಾಕ್ಷ್ಯ ನಾಶ ಮತ್ತು ಹಣದ ಆಮಿಷದ ಸಾಕ್ಷ್ಯಗಳನ್ನು ಸಮಗ್ರವಾಗಿ ಸಂಗ್ರಹಿಸಲಾಗಿದೆ. ಹೀಗಾಗಿ ಅರೆಸ್ಟ್ ವಾರೆಂಟ್ ಕೊಡಬೇಕು ಎಂದು ವಾದಿಸಿದರು. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೆ ಆದೇಶಿಸಿತು.
ಏನಿದು ಕೇಸ್?
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಳೆದ ಮಾರ್ಚ್ 14ರಂದು ನೀಡಲಾಗಿದ್ದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ಸಂಬAಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣ ಕೈಗೆತ್ತಿಕೊಂಡಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ. 41(ಒ) ಸಿಆರ್‌ಪಿಸಿ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ. ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಸರ್ಕಾರದ ವಿಶೇಷ ಅಭಿಯೋಜಕರಾಗಿ ಅಶೋಕ್ ನಾಯ್ಕ್ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.