ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ-ಕಹಳೆ ನ್ಯೂಸ್
ಎನ್ನೆಂಸಿ, : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ್ ಪೇರಾಲ್ ಮಾತನಾಡಿ, ಸಕಾರಾತ್ಮಕ ಮನೋಭಾವದೊಂದಿಗೆ ಜೀವನ ರೂಪಿಸಿಕೊಳ್ಳಿ. ಯಾವುದೇ ವೃತ್ತಿಯ ಬಗ್ಗೆ ಕೀಳರಿಮೆ ಬೇಡ. ಪಡೆದ ಪದವಿ ವಿದ್ಯಾಭ್ಯಾಸದ ನೆರವಿನಿಂದ ಉತ್ತಮ ಜೀವನ ರೂಪಿಸಿಕೊಳ್ಳುವುದು ಪ್ರಮುಖವಾದುದು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ರುದ್ರ ಕುಮಾರ್ ಎಂ ಎಂ ವಿದ್ಯಾರ್ಥಿಗಳಿಗೆ ಶುಭಹಾರೈಕೆಯ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಅತಿಥಿಗಳಾಗಿ ಕಾಲೇಜಿನ ಗೌರವ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ಪ್ರಥಮ ಬಿಕಾಂ ವಿದ್ಯಾರ್ಥಿನಿ ತುಳಸಿ ಸ್ವಾಗತಿಸಿ, ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಜೀಷ್ಮಾ ವಂದಿಸಿದರು. ಪ್ರಥಮ ಬಿಸಿಎ ಕೌಶಿಕ್ ಮತ್ತು ಪ್ರಥಮ ಬಿಎಸ್ಸಿ ಚೈತ್ರಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಪ್ರತಿ ವಿಭಾಗಗಳಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.