Sunday, January 26, 2025
ಉಡುಪಿಕಾಪುಸುದ್ದಿ

ಉಡುಪಿ :ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಭೇಟಿ-ಕಹಳೆ ನ್ಯೂಸ್

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ.

ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ತಡೆಗೋಡೆ ನಿರ್ಮಿಸಲು ಮತ್ತು ಜಾರುತ್ತಿರುವ ಬ್ರೇಕ್ ವಾಟರ್ ಕಲ್ಲುಗಳನ್ನು ವ್ಯವಸ್ಥಿತಗೊಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ರವರಿಗೆ ಸೂಚನೆ ನೀಡಲಾಗಿದೆ. ಹಾಗೂ ಅಲ್ಲಿನ ನಿವಾಸಿಗಳಿಗೆ ಕಡಲ್ಕೊರೆತದ ಪರಿಸ್ಥಿತಿಯ ಕುರಿತು ತಿಳುವಳಿಕೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಸ್ಯವರ್ಗದ ಉಪಸ್ಥಿತಿಯು ಸಮುದ್ರದ ಸವೆತ, ಚಂಡಮಾರುತದAಥ ಬಿರುಗಾಳಿಗಳಿಗೆ ನೈಸರ್ಗಿಕ ನಿರೋಧಕವಾಗಿದೆ ಎಂದು ಸಾಬೀತಾಗಿದೆ ಎಂಬುದನ್ನು ಗಮನಿಸಲಾಗಿದೆ. ಆದ್ದರಿಂದ ನಾವು ಕಡಲ್ಕೊರೆತ ಎದುರಿಸಲು ಸಮರ್ಥನೀಯ ಕ್ರಮವಾಗಿ ಜೈವಿಕ ತಡೆಗೋಡೆಯಾಗಿ ಜೈವಿಕ ರಕ್ಷಾಕವಚವನ್ನು ನಿರ್ಮಿಸಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕ್ರಮದ ಕುರಿತು ಶೀಘ್ರದಲ್ಲೇ ಬಂದರು ಮತ್ತು ಮೀನುಗಾರಿಕೆ ಇಲಾಖೆಯೊಂದಿಗೆ ಚರ್ಚಿಸಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ತಹಶಿಲ್ದಾರ್ ಪ್ರತಿಭಾ ಆರ್ ಪತ್ರಿಕೆಗೆ ತಿಳಿಸಿದ್ದಾರೆ.

ರೆವಿನ್ಯೂ ಇನ್ಸ್ಪೆಕ್ಟರ್ ಇಜ್ಜಾರ್ ಸಾಬಿರ್ ಹಾಗೂ ಗ್ರಾಮ ಆಡಳಿತಾಧಿಕಾರಿ ಲೋಕನಾಥ್ ಅವರು ಸ್ಥಳ ಪರಿಶೀಲನೆಗೆ ಸಾತ್ ನೀಡಿದರು.