Monday, November 25, 2024
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಹೆಚ್ಚಳ : ರಾಜ್ಯ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್‌ ಸೇಲ್ಸ್‌ ಟ್ಯಾಕ್ಸ್‌ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದಿದ್ದು, ಈಗ 29.84% ಗೆ ಏರಿಕೆ ಅಂದರೆ 3.9% ಹೆಚ್ಚಳವಾಗಿದೆ. ಅಂತೆಯೇ ಡೀಸೆಲ್ ಈ‌ ಹಿಂದೆ- 14.34% ಇದ್ದಿದ್ದು, ಈಗ 18.44%ಗೆ ಏರಿಕೆ ಕಂಡಿದೆ. ಅಂದರೆ 4.1% ರಷ್ಟು ಏರಿಕೆಯಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್‌ ದರ 100 ರೂಪಾಯಿ ದಾಟಲಿದೆ.

ಈಗ ಪೆಟ್ರೋಲ್‌ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್‌ ದರ 85.93 ರೂಪಾಯಿ ಇದೆ. ಅದು 89.43 ರೂಪಾಯಿಗೆ ಏರಿಕೆಯಾಗಲಿದೆ.