Monday, January 20, 2025
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ನಾಳೆ (ಜೂ.17) ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ ; ಅಭೂತಪೂರ್ವ ವಿಜಯ ದಾಖಲಿಸಿ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಅಭಿನಂದನಾ ಕಾರ್ಯಕ್ರಮ..!!- ಕಹಳೆ ನ್ಯೂಸ್ 

ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ  ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರ ಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಡಾ| ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಧಾನ ಪರಿಷತ್ತಿಗೆ ಚುನಾಯಿತರಾದ ಎಸ್ ಎಲ್ ಭೋಜೇಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಬಂಧುಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಭಿನಂದನ ಸಮಾರಂಭಕ್ಕೆ ಮುನ್ನ ಸಂಜೆ 3.30ಕ್ಕೆ ನಗರದ ಬಂಟ್ಸ್ ಹಾಸ್ಟೆಲ್ ವೃತ್ತದಿಂದ ಪುರಭವನದ ತನಕ ಬೃಹತ್ ವಾಹನ ಜಾಥ ನಡೆಯಲಿದ್ದು ವಿಜಯೋತ್ಸವ ಕಾರ್ಯಕ್ರಮ ಇನ್ನಷ್ಟು ಮೆರುಗನ್ನು ನೀಡಲಿದೆ.