Monday, January 20, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಬಿಳಿಯೂರು ದರ್ಖಾಸ್ ನಲ್ಲಿ 37ರ ಮಹಿಳೆಯ ಸಾವು ; ಕೊಲೆ ಶಂಕೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37 ) ಮೃತ ಮಹಿಳೆ.

ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ಮೃತಳ ಅಕ್ಕನ ಮಗ ಎಸೆಸ್ಸೆಲ್ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃತರು ಹೊಟೇಲ್ ಕಾರ್ಮಿಕೆಯಾಗಿದ್ದರು.